ಹೆದ್ದಾರಿ ಬಂದ್ ಚಳವಳಿ:ವಿವಿಧೆಡೆ ರೈತರ ಪ್ರತಿಭಟನೆ !

Kannada News

09-08-2017

ಮೈಸೂರು: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಇಂದು ದೇಶಾದ್ಯಂತ ರಾಷ್ಟ್ರೀಯ,ರಾಜ್ಯ ಹೆದ್ದಾರಿಗಳ ಬಂದ್ ಚಳವಳಿಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ ವಿವಿಧೆಡೆಗಳಲ್ಲಿ ರೈತರ ಪ್ರತಿಭಟನೆ ನಡೆಸಿದ್ದಾರೆ. ಕೆ.ಆರ್.ನಗರ ಪಟ್ಟಣದ ಕೃಷ್ಣರಾಜ ವೃತ್ತದಲ್ಲಿ, ರಸ್ತೆ ತಡೆ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದರಿಂದ ಬಿಗುವಿನ ವಾತಾವರಣವನ್ನು ಪೊಲೀಸರು ತಪ್ಪಿಸಿದ್ದಾರೆ. ಇನ್ನು ಪ್ರತಿಭಟನಾ ನಿರತ ರೈತರು, ಕೃಷಿ ಸಾಲಮನ್ನಾ ಪ್ರಮಾಣ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಕೃಷಿ ವಿಜ್ಞಾನಿ ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದೂ, ರಾಜ್ಯದ ಪ್ರಮುಖ ಜಲಾಶಯಗಳಿಂದ ಅಚ್ಚುಕಟ್ಟು ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು, ಮಹದಾಯಿ ನದಿ ನೀರಿನ ಯೋಜನೆಯ ಆರಂಭಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ಚಳುವಳಿ ನಡೆಸಿದರು. ರಾಷ್ಟ್ರೀಯ ಕಿಸಾನ್ ಮಹಾಸಂಘದ ವತಿಯಿಂದ, ಕರೆ ನೀಡಿದ್ದ ಹೆದ್ದಾರಿ ಬಂದ್ ಚಳವಳಿಯಲ್ಲಿ ದೇಶಾದ್ಯಂತ 153ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿದ್ದವು.

ಇನ್ನು ಮಂಡ್ಯದಲ್ಲಿ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಮಂಡ್ಯ ಜಿಲ್ಲೆ ಮದ್ದೂರಮ್ಮನ ಕೆರೆಯಲ್ಲಿ, ಕತ್ತಿನವರೆಗೂ ಮಣ್ಣು ಹಾಕಿಕೊಂಡು ಆಕ್ರೋಶ ಪ್ರದರ್ಶಿಸಿದ್ದಾರೆ. ಕನ್ನಡ ಜನಪರ ವೇದಿಕೆ ಸದಸ್ಯರಿಂದ ವಿನೂತನ ಪ್ರತಿಭಟನೆ ನಡೆಸಿದದ್ದೂ, ಪ್ರತಿಭಟನೆ 38 ನೇ ದಿನಕ್ಕೆ ಕಾಲಿಟ್ಟಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ