ಭೀಕರ ರಸ್ತೆ ಅಪಘಾತ !

Kannada News

10-08-2017

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ, ಹೊನ್ನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತ ಟ್ರಕ್ ಒಂದಕ್ಕೆ ಸ್ವಿಫ್ಟ್ ಕಾರು ಡಿಕ್ಕಿಹೊಡೆದಿದ್ದೂ, ಕಾರಿನಲ್ಲಿದ್ದ 6 ಮಂದಿಯಲ್ಲಿ, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕಾಶ್ (13), ಸೌಮ್ಯ (13), ಸುವರ್ಣಾ( 65), ಪ್ರಭು (೫೫), ಮೃತ ದುರ್ದೈವಿಗಳು. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಕಾರು ಹುಬ್ಬಳ್ಳಿ ಕಡೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆಯಾದರು, ಖಚಿತ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ,ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಕಾರವಾರ ಭೀಕರ ರಸ್ತೆ ಅಪಘಾತ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ