ವಿಷ ಸೇವಿಸಿ ರೈತ ಆತ್ಮಹತ್ಯೆ !

Kannada News

10-08-2017

ಬೆಂಗಳೂರು: ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟದಲ್ಲಿ ನೆಡೆದಿದೆ. ತನ್ನ ತಂದೆಯ ಸಮಾಧಿಯ ಬಳಿಯೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಡ್ಲಘಟ್ಟ ತಾಲ್ಲೂಕಿನ ಆನೂರಿನ ಪ್ರಕಾಶ್ (35) ಮೃತ ರೈತ. ಇವರು ತಮ್ಮ ಜಮೀನಿನಲ್ಲಿ ಎರಡು ಬೋರ್‍ವೆಲ್ ಕೊರೆಸಿದ್ದು, ನೀರು ಸಿಗದೇ ಕಂಗಲಾಗಿದ್ದರು, ಜೊತೆಗೆ ಕೈಸಾಲ ಹಾಗೂ ಬ್ಯಾಂಕ್‍ ನಲ್ಲಿ ಸಾಲ ಪಡೆದಿದ್ದರು ಎನ್ನಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಶಿರಡಿ ಪ್ರವಾಸಕ್ಕೆ ಕಳಿಸಿದ್ದ ಪ್ರಕಾಶ್ ಅವರು, ತನ್ನ ತಂದೆಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ