ವೈದ್ಯರ ನಿರ್ಲಕ್ಷ್ಯ ಬಾಣಂತಿ ಸಾವು !

Kannada News

10-08-2017

ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಹಸಿ ಬಾಣಂತಿ ಸಾವನ್ನಪ್ಪಿರುವ ಘಟನೆ, ನಗರದ ಸುಬ್ಬಯ್ಯ ವೃತ್ತದ ಬಳಿ ಇರುವ, ಫಿನಿಕ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದೆ. ಕೆ.ಎಸ್. ಗಾರ್ಡನ್ ನಿವಾಸಿ ಸುಮಿತ್ರ ಮೃತಪಟ್ಟ ಮಹಿಳೆಯಾಗಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಸುಮಿತ್ರ ಅವರನ್ನು ಫಿನಿಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೇ ದಿನ ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಸುಮಿತ್ರ ಆರೋಗ್ಯವಾಗಿದ್ದರು. ಆದರೆ ಇಂದು ಬೆಳಿಗಿನ ಜಾವ ತಾಯಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ