ಹಣ್ಣಿನ ಅಂಗಡಿಗೆ ಆಕಸ್ಮಿಕ ಬೆಂಕಿ !

Kannada News

11-08-2017

ಉತ್ತರ ಕನ್ನಡ: ಹಣ್ಣಿನ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದೂ, ಹಣ್ಣುಗಳು ಸೇರಿದಂತೆ, ಇತರೆ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟುಹೋಗಿರುವ ಘಟನೆಯು, ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ನಗರದ ಶಿವಾಜಿ ಚೌಕ ಬಳಿ ಘಟನೆ ಸಂಭವಿಸಿದೆ. ಅಶೋಕ್ ಜಾಧವ ಎನ್ನುವವರಿಗೆ ಸೇರಿದ ಕಟ್ಟಡದಲ್ಲಿ, ಹಣ್ಣಿನ ವ್ಯಾಪಾರ ಮಾಡುತ್ತಿದ್ದ, ಅಬ್ದುಲ್ ಜಬ್ಬಾರ್ ಅವರಿಗೆ ಸೇರಿದ ಅಂಗಡಿ ಎಂದು ತಿಳಿದು ಬಂದಿದೆ. ಮಧ್ಯರಾತ್ರಿ ಈ ಅವಘಡ ಸಂಭವಿಸಿದ್ದೂ, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ . ಘಟನೆಯಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ ಎಂದು ಹೇಳಲಾಗುತ್ತಿದೆ. ಪ್ರಕರಣ ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ