ಎಚ್.ಡಿ.ಕೆ ಅನಾರೋಗ್ಯ: ಚಿಕಿತ್ಸೆಗಾಗಿ ಸಿಂಗಾಪುರಕ್ಕೆ !

Kannada News

11-08-2017 250

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದ್ದೂ, ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇತ್ತಿಚೆಗೆ ತೀವ್ರ ಕೆಮ್ಮು ಮತ್ತು ಕಫ‌ದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರಸ್ವಾಮಿ ಅವರು, ಧರ್ಮಸ್ಥಳದ ಉಜಿರೆಯಲ್ಲಿ  ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫ‌ಲಕಾರಿಯಾಗದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಗುರುವಾರ ಸಿಂಗಾಪುರಕ್ಕೆ ತೆರಳಿದ್ದಾರೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಪ್ರವಾಸದ ವೇಳೆ ಅಭಿಮಾನಿಗಳು ಸಿಡಿಸಿದ ಪಟಾಕಿಯ ಹೊಗೆ ಸೇವನೆಯಿಂದ ಕೆಮ್ಮು ಮತ್ತು ಕಫ‌ದ ಸಮಸ್ಯೆ ಕಾಣಿಸಿಕೊಂಡಿದ್ದು, ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಕುಮಾರಸ್ವಾಮಿಯವರ ಹತ್ತಿರದ ಸಂಬಂಧಿಯೂ ಆಗಿರುವ ಮೈಸೂರು ವಿ.ವಿ ಯ ಮಾಜಿ ಕುಲಪತಿ ಪ್ರೊ. ಕೆ.ಎಸ್ ರಂಗಪ್ಪ ಕೂಡ ಕುಮಾರ ಸ್ವಾಮಿಯವರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದಾರೆಂದು ತಿಳಿದು ಬಂದಿದೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ