ಬಸ್ ವೇಗಕ್ಕೆ, ಬೈಕ್ ಸವಾರ ಬಲಿ !

Kannada News

11-08-2017

ಬೆಂಗಳೂರು: ನಗರದ ಹೊರವಲಯದ ಹೆಬ್ಬಗೋಡಿಯ, ಹೊಸೂರು ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು, ಕೆಲಸಕ್ಕೆ ತೆರಳುತ್ತಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವಿನಪ್ಪಿರುವ ದುರ್ಘಟನೆ ಸಂಭವಿಸಿದೆ.

ಬೈಕ್ ಸವಾರನನ್ನು ರಾಮಮೂರ್ತಿ ನಗರದ ನಿವಾಸಿ ವಿಜಯ್ ಬಾಬು(35) ಎಂದು ಗುರುತಿಸಲಾಗಿದೆ. ವಿಜಯ್ ಬೊಮ್ಮಸಂದ್ರದ ಖಾಸಗಿ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬೆಳಿಗ್ಗೆ ಕಾರ್ಖಾನೆಗೆ ಬೈಕ್ ನಲ್ಲಿ ಕೆಲಸಕ್ಕೆ ತೆರಳುವಾಗ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ವಿಜಯ್ ಕೆಳಗೆ ಬಿದ್ದಾಗ ಅವರ ತಲೆ ಮೇಲೆ ಹರಿದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳದಲ್ಲಿದ್ದವರು ವಿಜಯ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ ವಿಜಯ್ ಬದುಕುಳಿಯಲಿಲ್ಲ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಹೆಬ್ಬಗೊಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಸ್ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ