ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ !

Kannada News

11-08-2017

ಬೆಂಗಳೂರು: ಕಾಲೇಜಿನ ವಸತಿಗೃಹದ ಏಳನೇ ಮಹಡಿಯ ಕಟ್ಟಡದಿಂದ ಕೆಳಗೆ ಹಾರಿ ಇಂಟಿಗ್ರೇಟೆಡ್ ಕೋರ್ಸ್‍ನ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಎಲೆಕ್ಟ್ರಾನ್ ಸಿಟಿಯಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಆಂಧ್ರ ಪ್ರದೇಶದ ಹೈದರಾಬಾದ್‍ ನ ಸಾಯಿ ಶರತ್(22)ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನ್ ಸಿಟಿಯ ಐಐಟಿ ಕಾಲೇಜಿನಲ್ಲಿ 5 ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್‍ನ 4ನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ.

ರಾತ್ರಿ ಸ್ನೇಹಿತರೊಂದಿಗೆ ಊಟ ಮುಗಿಸಿಕೊಂಡು ವಸತಿಗೃಹಕ್ಕೆ ಬಂದಿದ್ದ ಸಾಯಿ ಶರತ್ ಮುಂಜಾನೆ 5ರ ವೇಳೆ ಏಳನೇ ಮಹಡಿಯ ಕಟ್ಟಡದಿಂದ ಕೆಳಗೆ ಹಾರಿದ್ದಾನೆ. ಕಾವಲಿಗಿದ್ದ ಸೆಕ್ಯೂರಿಟಿ ಗಾರ್ಡ್ ಶಬ್ದ ಕೇಳಿ ಬಂದು ನೋಡಿದಾಗ ಶರತ್ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಅತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆವೇಳೆಗಾಗಲೇ ಮೃತಪಟ್ಟಿದ್ದ. ಈತನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನ್ ಸಿಟಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಡಿಸಿಪಿ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ