ಮರಕ್ಕೆ ಲಾರಿ ಡಿಕ್ಕಿ, ಇಬ್ಬರ ಸಾವು !

Kannada News

12-08-2017

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ, ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐದು ಜನರಿಗೆ ಗಂಭೀರ ಗಾಯಗಳಾಗಿದ್ದೂ, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ, ದೊಡ್ಡಕಡತೂರು ಗ್ರಾಮದ ಬಳಿ ಬೆಳಿಗ್ಗೆ 6.30 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಕಾಡದೇನಹಳ್ಳಿ ನಿವಾಸಿ ರಮೇಶ್ (28), ಗಾಂಧಿಸರ್ಕಲ್ ನಿವಾಸಿ ನಾಗರಾಜ್ (32)ಮೃತರು ಎಂದು ಗುರುತಿಸಲಾಗಿದೆ.  ಕೂಲಿ ಕೆಲಸದವರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೂ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ