ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ !

Kannada News

12-08-2017

ರಾಯಚೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಆಕಾಂಕ್ಷೆ ನಾನಲ್ಲ. ಪಕ್ಷ ಕೊಟ್ಟ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಮುಂದಿನ ಸಿಎಂ ಬಗ್ಗೆ ಪತ್ರಕರ್ತರು ಕೇಳಿದ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ನಾನಂತೂ ಮುಖ್ಯಮಂತ್ರಿ ಆಕಾಂಕ್ಷೆಯಲ್ಲ .ಪಕ್ಷ ಕೊಟ್ಟ ಕೆಲಸವನ್ನು ಪಾಮಾಣಿಕವಾಗಿ ನಿರ್ವಹಿಸುವ ಕಡೆಗೆ ಗಮನ ಹರಿಸುತಿದ್ದೇನೆ. ಪಕ್ಷದ ಪ್ರಚಾರ ಸಮಿತಿ ಹೊಣೆಯನ್ನು ನನಗೆ ವಹಿಸಿದೆ ಅದನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ಸ್ಪಷ್ಟಪಡಿಸಿದರು.

ರೈತರಿಗೆ ವಿದ್ಯುತ್ ನೀಡುವ ಬಗ್ಗೆ ಮಾತನಾಡಿದ ಸಚಿವರು, ನಿರಂತರ ವಿದ್ಯುತ್ ನೀಡುವ ಬಗ್ಗೆ ಪರಿಶೀಲನೆಯಲ್ಲಿದ್ದು,ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ರೈತರಿಗೆ 24 ಘಂಟೆ ವಿದ್ಯುತ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ 10,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಹೆಚ್ಚುವ ಸಾಧ್ಯತೆಯಿದ್ದು, ಸಾವಿರ ಮೆಗಾವ್ಯಾಟ್ ವಿದ್ಯುತ್‍ಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಪ್ರಸ್ತುತ 8,500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಈಡೇರಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ವಿದ್ಯುತ್ ಖರೀದಿಗೆ ಕ್ರಮಕೈಗೊಳ್ಳಲಾಗಿದೆ.ಇಂತಹ ಸಂದರ್ಭದಲ್ಲಿ ಹೆಚ್ಚಿನ ನಿರಾವರಿ ಪ್ರದೇಶಗಳ ರೈತರ ಪಂಪ್ ಸೆಟ್‍ಗೆ ನಿರಂತರ ವಿದ್ಯುತ್ ನೀಡುವುದು ಸಾಧ್ಯವಿಲ್ಲ ಎಂದು ಹೇಳಿದ ಅವರು ಬೆಂಗಳೂರಿನ ಯಲಹಂಕದಲ್ಲಿ ಗ್ಯಾಸ್ ಆಧಾರಿತ ವಿದ್ಯುತ್ ಕೇಂದ್ರ ಮುಂದಿನ ವರ್ಷಕ್ಕೆ ಆರಂಭವಾಗಲಿದೆ ಎಂದರು.

ನಟ ಉಪೇಂದ್ರ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು ,ಉಪೇಂದ್ರ ರಾಜಕೀಯಕ್ಕೆ ಬಂದರೆ ಸ್ವಾಗತ .ಅವರು ಬಣ್ಣ ಹಾಕಿ ಸಿನೆಮಾ ಮಾಡುತ್ತಿದ್ದರು.ಈಗ ಬಣ್ಣ ಹಚ್ಚದೇ ರಾಜಕೀಯ ಮಾಡಲಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ