ಅನೈತಿಕ ಸಂಬಂಧ: ಬೇಸತ್ತ ಮಹಿಳೆ ಆತ್ಮಹತ್ಯೆ !

Kannada News

16-08-2017

ಬೆಂಗಳೂರು: ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ, ಪತಿಯ ಕಿರುಕುಳ ತಾಳಲಾರದೇ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಣಿಗಲ್ ತಾಲೂಕಿನ ಕೆಂಪನಹಳ್ಳಿಯ ಸರ್ಕಾರಿ ಶಾಲಾ ಶಿಕ್ಷಕಿ ತೇಜಾವತಿ(30) ಆತ್ಮಹತ್ಯೆ ಮಾಡಿಕೊಂಡವರು, ತೇಜಾವತಿ ಪತಿ ರಮೇಶ್ ನ ಕಿರುಕುಳ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಮೇಶ್ ಹಾಗೂ ತೇಜಾವತಿ ದಂಪತಿ ಮದುವೆಯಾಗಿ 12 ವರ್ಷ ಕಳೆದಿದ್ದು, ಒಂದು ಮುದ್ದಾದ ಮಗುವಿದೆ. ಗಂಡ ಹೆಂಡತಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ.

ಗಂಡ ರಮೇಶನಿಗೆ ಅನೈತಿಕ ಸಂಬಂಧವಿದೆ ಎಂದು ದಂಪತಿ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದರಿಂದ ತೇಜಾವತಿ ವಿಷ ಸೇವಿಸಿ ಅಸ್ವಸ್ಥರಾಗಿದ್ದಾರೆ,  ಕೂಡಲೇ ಸ್ಥಳೀಯ ಆಸ್ಪತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ತೇಜಾವತಿ ಮೃತಪಟ್ಟಿದ್ದಾರೆ. ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ