ಎತ್ತುಗಳ ಅಕ್ರಮ ಸಾಗಾಟ: 8 ಮಂದಿ ಬಂಧನ

Kannada News

16-08-2017

ಉತ್ತರ ಕನ್ನಡ : ಅಕ್ರಮವಾಗಿ ಎತ್ತುಗಳನ್ನು ಸಾಗಿಸುತ್ತಿದ್ದ ಎರಡು ಕಂಟೇನರ್ ಗಳನ್ನು ಜಪ್ತಿಮಾಡಿರುವ ಘಟನೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಯಲ್ಲಾಪುರದಲ್ಲಿ, ತೆಲಂಗಾಣ ರಾಜ್ಯದ ರಂಗಾರೆಡ್ಡಿಯಿಂದ, ಭಟ್ಕಳಕ್ಕೆ ಅಕ್ರಮವಾಗಿ ಎತ್ತುಗಳನ್ನು ಸಾಗಾಟ ಮಾಡುತ್ತಿದ್ದೂ, ಎರಡು ಕಂಟೇನರ್ ಗಳಲ್ಲಿ ಒಟ್ಟು 62 ಎತ್ತುಗಳಿದ್ದವು. ಅನುಮಾನದ ಮೇರೆಗೆ ಪೊಲೀಸರು ತಪಾಸಣೆ ನಡೆಸಿದ ವೇಳೆ, ಅಕ್ರಮವಾಗಿ ಎತ್ತುಗಳನ್ನು ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ. ಅಲ್ಲದೇ ಎಲ್ಲಾ ಎತ್ತುಗಳನ್ನು ರಕ್ಷಣೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದೂ, ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ