ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಅನಿವಾರ್ಯ..?

Kannada News

16-08-2017

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಸುತ್ತೂರು ಮಠಾಧಿಪತಿಗಳಾಗಿರುವ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದು, ನಂತರ ಸುತ್ತೂರು ಶ್ರೀಗಳ ಜೊತೆ ಕುಮಾರಸ್ವಾಮಿ ಅವರು ರಹಸ್ಯ ಮಾತುಕತೆ ನಡೆಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದೂ, ಈ ಕುರಿತು ತೀವ್ರ ಕುತೂಹಲ ಮೂಡಿಸಿದೆ. ಇದಾದ ನಂತರ ಮಾಧ್ಯಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಜೆಡಿಎಸ್ ಅನಿವಾರ್ಯವಾಗಿದೆ, ಭವಿಷ್ಯದಲ್ಲಿ ಜೆಡಿಎಸ್ ನೆರವಿನಿಂದ ಅಧಿಕಾರಕ್ಕೆ ಬರಬಹುದೆಂದು ಎರಡೂ ರಾಷ್ಟ್ರೀಯ ಪಕ್ಷಗಳು ಭಾವಿಸಿವೆ ಎಂದರು.

ಇನ್ನು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾಗಿರುವ, ಸ್ಥಿತಿಗೆ ಈ ಮೊದಲು ಅಧಿಕಾರ ನಡೆಸಿದ ಸರ್ಕಾರಗಳು ಕಾರಣವಾಗಿವೆ ಎಂದು ಬೆಂಗಳೂರು ಮೇಯರ್ ಪದ್ಮಾವತಿ ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಹಾಗಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಕಳೆದರೂ ಈ ಬಗ್ಗೆ ಇವರ ಸರ್ಕಾರ ಏನು ಮಾಡುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಜನತೆ ಮೊದಲು ಕಾಂಗ್ರೆಸ್, ಬಿಜೆಪಿಗೆ ಮತ ನೀಡುವುದನ್ನು ನಿಲ್ಲಿಸಬೇಕು ಎಂದರು. 

20 ತಿಂಗಳು ಉತ್ತಮ ಆಡಳಿತ ನೀಡಿರುವ, ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಗೆ ಮತ್ತೊಮ್ಮೆ ಅವಕಾಶ ನೀಡಬೇಕು, ಆಗ ಮಾತ್ರ ಬೆಂಗಳೂರಿನ ಜನತೆಯ ಸಮಸ್ಯೆಗಳನ್ನು ಹೋಗಲಾಡಿಸಲು ಸಾಧ್ಯ ಎಂದು ಪ್ರತಿಪಾದಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ