ಎಲ್ಲಾ ಕ್ಷೇತ್ರದಲ್ಲೂ ಕೇಂದ್ರ ಸರ್ಕಾರ ವಿಫಲ..?

Kannada News

16-08-2017

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ, ಶಾಸಕರ ಖರೀದಿ ಸಹಿತ ಪ್ರತಿಪಕ್ಷ ಆಡಳಿತ ಇರುವ ರಾಜ್ಯ ಸರ್ಕಾರಗಳನ್ನು ಮುಗಿಸಲು ಕೇಂದ್ರ ಎನ್.ಡಿ.ಎ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಆರೋಪಸಿದ್ದಾರೆ. ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರದಲ್ಲೂ ವೈಫಲ್ಯ ಹೊಂದಿದ್ದು ಅದನ್ನು ಮುಚ್ಚಿ ಹಾಕಲು ಪ್ರತಿ ಪಕ್ಷಗಳ ಆಡಳಿತ ಇರುವ ರಾಜ್ಯ ಸರ್ಕಾರಗಳನ್ನು ಟಾರ್ಗೆಟ್ ಮಾಡಲಾಗುತ್ತದೆ ಇದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ ಎಂದರು. ಕರ್ನಾಟಕದ 'ಶಾದಿ ಭಾಗ್ಯ' ಮಾದರಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಮೂಲಕ, ಇಂದು ಕರ್ನಾಟಕ ದೇಶಕ್ಕೆ ಎಲ್ಲಾ ಕ್ಷೇತ್ರದಲ್ಲೂ ಮಾದರಿಯಾಗಿದೆ ಎಂದರು. ನಗರದ ಬಡವರಿಗೆ, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಉಪಹಾರ ಒದಗಿಸುವ ಇಂದಿರಾ ಕ್ಯಾಂಟೀನ್ ಯೋಜನೆ ಮಾದರಿ ಯೋಜನೆಯಾಗಿದ್ದು, ಹಸಿವು ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಶ್ಲಾಘಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ