ಇಂದಿನಿಂದ ಇಂದಿರಾ ಕ್ಯಾಂಟೀನ್ ಆರಂಭ !

Kannada News

16-08-2017

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯ ಇಂದಿರಾ ಕ್ಯಾಂಟಿನ್‍ ಗೆ ರಾಹುಲ್‍ ಗಾಂಧಿಯವರು ಇಂದು ವಿದ್ಯುಕ್ತವಾಗಿ ಚಾಲನೆ ನೀಡಿದರು. ಬಡವರ, ಶ್ರಮಿಕರ, ಕೂಲಿ ಕಾರ್ಮಿಕರ, ವಲಸಿಗರನ್ನು ಗಮನದಲ್ಲಿರಿಸಿಕೊಂಡು ಬೆಂಗಳೂರು ಮಹಾನಗರದಲ್ಲಿ ಸರ್ಕಾರ ಸ್ಥಾಪಿಸಿರುವ ಇಂದಿರಾ ಕ್ಯಾಂಟಿನ್‍ ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಜಯನಗರದ ಕನಕನಪಾಳ್ಯದಲ್ಲಿ ಸ್ವತಃ ಉಪಹಾರ ಸೇವಿಸುವ ಮೂಲಕ ಕ್ಯಾಂಟಿನ್‍ ಗಳನ್ನು ಆರಂಭಿಸಿದ್ದು ವಿಶೇಷವಾಗಿತ್ತು.

ಎಲ್ಲ 198 ವಾರ್ಡ್‍ಗಳಲ್ಲಿ ಸ್ಥಾಪನೆಯಾಗಬೇಕಿದ್ದ ಇಂದಿರಾ ಕ್ಯಾಂಟಿನ್‍ಗಳು ಹಲವು ತಾಂತ್ರಿಕ ಕಾರಣಗಳಿಂದ 101 ಕಡೆ ಮಾತ್ರ ಸ್ಥಾಪನೆಯಾಗಿದ್ದು, ಉಳಿದ ಕ್ಯಾಂಟಿನ್‍ ಗಳು ಅಕ್ಟೋಬರ್ 2ರೊಳಗೆ ಆರಂಭವಾಗಲಿವೆ. ಇಂದು ನವದೆಹಲಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್‍ ಗಾಂಧಿ ಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪಕ್ಷದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮುಂತಾದವರು ಸ್ವಾಗತಿಸಿದರು.

ಅಲ್ಲಿಂದ ನೇರವಾಗಿ ಕನಕನಪಾಳ್ಯದಲ್ಲಿ ಆಯೋಜಿಸಿದ್ದ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಕ್ಯಾಂಟಿನ್‍ ಅನ್ನು ವೀಕ್ಷಿಸಿದರು. ನಂತರ ಗಣ್ಯರೊಂದಿಗೆ ಕುಳಿತು ಉಪಹಾರ ಸೇವಿಸಿದರು. ಅಲ್ಲಿಯೇ ಆಯೋಜಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಬಡ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟಿನ್‍ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತರುತ್ತಿರುವುದು ಅತ್ಯಂತ ಉತ್ತಮವಾಗಿದೆ ಮತ್ತು ದೇಶಕ್ಕೆ ಮಾದರಿಯಾಗಿದೆ ಎಂದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ