ಬೈಕ್ ಗೆ ಬಸ್ ಡಿಕ್ಕಿ: ವ್ಯಕ್ತಿ ಸಾವು !

Kannada News

16-08-2017

ಬೆಂಗಳೂರು: ನಗರದ ಹೊರವಲಯದ ಮಾಗಡಿ ರಸ್ತೆಯ ಸೀಗೆಹಳ್ಳಿ ಗೆಡ್ಡೆ ಬಳಿ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದು ಬೈಕ್‍ ಸವಾರಿ ಮಾಡುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ, ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತಪಟ್ಟವರನ್ನು ಸೀಗೆಹಳ್ಳಿಯ ಲೋಕೇಶ್ (18) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಲೋಕೇಶ್ ಸ್ನೇಹಿತನನ್ನು ಬೈಕ್‍ನಲ್ಲಿ ಹಿಂದೆ ಕೂರಿಸಿಕೊಂಡು ಮನೆಗೆ ಹೋಗುತ್ತಿದ್ದಾಗ, ಸೀಗೆಹಳ್ಳಿ ಬಳಿ, ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟು. ಹಿಂಬದಿ ಸವಾರ ಗಾಯಗೊಂಡಿದ್ದಾನೆ, ಗಾಯಗೊಂಡ ಹಿಂಬದಿ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಬಸ್ ವಶಕ್ಕೆ ಪಡೆದಿದ್ದೂ, ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ