ತಾಯಿ ಬುದ್ದಿ ಹೇಳಿದ್ದಕ್ಕೆ ಮಗ ಆತ್ಮಹತ್ಯೆ !

Kannada News

16-08-2017

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ, ಪತ್ನಿಯನ್ನು ತೊರೆದಿದ್ದ ಯುವಕನೊಬ್ಬ, ತಾಯಿಯ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಲಹಂಕ ಉಪನಗರದ ಚಿಕ್ಕಬೊಮ್ಮಸಂದ್ರದಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚಿಕ್ಕಬೊಮ್ಮಸಂದ್ರದ 5ನೇ ಕ್ರಾಸ್‍ನ ಸುರೇಶ್ (27) ಎಂದು ಗುರುತಿಸಲಾಗಿದೆ. ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಸುರೇಶ್ ಪತ್ನಿಯನ್ನು ಬಿಟ್ಟು 5 ತಿಂಗಳಿಂದ ಬೇರೆಯಾಗಿ ವಾಸಿಸುತ್ತಿದ್ದ.

ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸುರೇಶ್ ಕುಡಿತದ ಚಟ ಅಂಟಿಸಿಕೊಂಡಿದ್ದು, ಮಧ್ಯರಾತ್ರಿ ಕುಡಿದು ಲೇಟಾಗಿ ಬಂದಿದ್ದನ್ನು ತಾಯಿ ಪ್ರಶ್ನಿಸಿ, ಬುದ್ಧಿ ಹೇಳಿದ್ದಾರೆ. ಇದರಿಂದ ನೊಂದ ಆತ ಮಲಗಲು ಹೋದ ಕೋಣೆಯಲ್ಲಿಯೇ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಲಹಂಕ ಉಪನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ