ಬೈಕ್ ಗೆ ಬೆಂಕಿ: ಕಿಡಿಗೇಡಿಗಳ ದುಷ್ಕೃತ್ಯ !

Kannada News

17-08-2017

ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಬೆಂಕಿಗೆ ಆಹುತಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕನಕಗಿರಿ ಬಡಾವಣೆಯ, ಅರಿವು ಸ್ವಯಂ ಸೇವಾ ಸಂಸ್ಥೆಯ ಅಧ್ಯಕ್ಷ, ಶ್ರೀಕಾಂತ್ ಕಶ್ಯಪ್ ಎಂಬುವರಿಗೆ ಸೇರಿದ ಬೈಕ್ ಬೆಂಕಿಗೆ ಆಹುತಿಯಾಗಿದೆ. ಈ ಹಿಂದೆಯೂ ಇದೇ ರೀತಿ ಶ್ರೀಕಾಂತ್ ಕಶ್ಯಪ್ ಅವರಿಗೆ ಸೇರಿದ ಬೈಕ್ ಗೆ ಅವರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿತ್ತು. ಇದೀಗ ಎರಡನೇ ಬಾರಿ ಇವರ ಬೈಕ್ ಗೆ  ಬೆಂಕಿ ಹಚ್ಚಲಾಗಿದೆ. ಯಾರೋ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಶ್ರೀಕಾಂತ್ ಕಶ್ಯಪ್ ದೂರು ಸಲ್ಲಿಸಿದ್ದೂ, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ