ಶಾಸಕ ಇಕ್ಬಾಲ್ ಅನ್ಸಾರಿ: ಕಾಂಗ್ರೆಸ್ ಗೆ ಬೇಡ..?

Kannada News

17-08-2017

ಕೊಪ್ಪಳ: ಜೆಡಿಎಸ್ ನ ಬಂಡಾಯ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವಿಚಾರ, ಇನ್ನು ಚರ್ಚೆಯಲ್ಲಿರುವಾಗಲೇ, ಶಾಸಕ ಇಕ್ಬಾಲ್ ಅನ್ಸಾರಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೊದಲೇ ವಿರೋಧ ವ್ಯಕ್ತವಾಗಿದೆ. ಮಾಜಿ ವಿಧಾನಪರಿಷತ್ ಸದಸ್ಯ ಎಚ್.ಆರ್.ಶ್ರೀನಾಥ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿಂದು ಮಾತನಾಡಿದ ಅವರು, ಇಕ್ಬಾಲ್ ಅನ್ಸಾರಿ ಕಾಂಗ್ರೆಸ್ ಪಕ್ಷ ವಿರೋಧ ಚಟುವಟಿಕೆ ಮಾಡಿದ್ದಾರೆ, ಯಾವುದೇ ಕಾರಣಕ್ಕೂ, ಕಾಂಗ್ರೆಸ್ ಪಕ್ಷಕ್ಕೆ ಅನ್ಸಾರಿಯವರನ್ನ ಸೇರಿಸಿಕೊಳ್ಳಬಾರದು ಎಂದು ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದೆಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಪತ್ರ ಬರೆದಿರುವೆ ಎಂದೂ ತಿಳಿಸಿದರು. ಇಕ್ಬಾಲ್ ಅನ್ಸಾರಿ ಎ.ಪಿ.ಎಮ್.ಸಿ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರೆಂದು ಆರೋಪಿಸಿದ್ದಾರೆ. ಇದಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ್ರೆ ನಿಷ್ಠಾವಂತ ಕಾರ್ಯಕರ್ತರಿಗೆ ನೋವಾಗುತ್ತದೆ. ಇನ್ನು ಆರು ಜನ ಜೆಡಿಎಸ್ ಬಂಡಾಯ ಶಾಸಕರನ್ನು, ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಿ, ಆದರೆ ಅವರಿಗೆ ಚುನಾವಣಾಯಲ್ಲಿ ಟಿಕೆಟ್ ಕೊಡಬಾರದು, ಮೊದಲು ಅವರು, ಪಕ್ಷ ಸಂಘಟನೆ ಮಾಡಲಿ ಎಂದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ