ಅನ್ನದ ಪ್ಲೇಟುಗಳಲ್ಲಿ ಅಂಬೇಡ್ಕರ್ ಫೋಟೋ !

Kannada News

17-08-2017 548

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಉಪಯೋಗಿಸಿಕೊಂಡು, ಅವುಗಳನ್ನು ಅವಮಾನ ಮಾಡುವ ರೀತಿಯಲ್ಲಿ ಬಳಸಿರುವ ಘಟನೆಯು, ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. ತಾಲ್ಲೂಕಿನ ವೆಂಕಟಯ್ಯನ ಛತ್ರ ಗ್ರಾಮದ, ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಅನ್ನದ ಪ್ಲೇಟುಗಳಲ್ಲಿ ಊಟ ಮಾಡಿ, ಬೀಸಾಡಿರುವುದು ಕಂಡುಬಂದಿದೆ. ಇದನ್ನು ಗಮನಿಸಿದ ಗ್ರಾಮಸ್ಥರು, ಹಾಗೂ ವಿವಿಧ ಸಂಘಟನೆಗಳು, ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಪ್ರಾಂಶುಪಾಲರನ್ನು ಪ್ರಶ್ನಿಸಿದಾಗ, ಈ ವಿಚಾರ ನನಗೇ ತಿಳಿದೇ ಇಲ್ಲ ಎಂದು ಹೇಳಿದ್ದಾರೆ. ಆದರೆ, ಪ್ರಾಂಶುಪಾಲರ ಗಮನಕ್ಕೆ ಬಾರದೇ ಈ ಘಟನೆ ನಡೆದಿದೆಯೇ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೂಡಲೆ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರು ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ