ಕೋರ್ಟ್ ಆವರಣದಲ್ಲಿ ಫೈರಿಂಗ್: ಆರೋಪಿ ಸೆರೆ

Kannada News

17-08-2017

ವಿಜಯಪುರ: ಅಗಸ್ಟ್ 8 ರಂದು ಕೋರ್ಟ್ ಆವರಣದಲ್ಲಿ ಬಾಗಪ್ಪ ಹರಿಜನ ಮೇಲೆ ಶೂಟೌಟ್ ನಡೆಸಿದ ಪ್ರಕರಣದಲ್ಲಿ, ಫೈರಿಂಗ್ ಮಾಡಿದ ಪ್ರಮುಖ ಆರೋಪಿಯನ್ನು ಸೆರೆ ಹಿಡಿಯುವಲ್ಲಿ, ವಿಜಯಪುರದ ಇಂಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೀರೇಶ ಹಡಪದ ಫೈರಿಂಗ್ ಮಾಡಿದ ಪ್ರಮುಖ ಆರೋಪಿ. ಇಂಡಿಯ ಡಾಬಾವೊಂದರಲ್ಲಿ ಪೀರೇಶನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಪೀರೇಶ ಹಡಪದ ವಿಜಯಪುರಕ್ಕೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಭಂದಿಸಿದಂತೆ ಈಗಾಗಲೆ, ಅಗಸ್ಟ್ 15 ರಂದು, ಆರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿ ಸರೆಯಾಗಿದ್ದಾನೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ