ಪ್ರತ್ಯೇಕ ಧರ್ಮ ಬೇಡ: ಮೌನ ಪ್ರತಿಭಟನೆ !

Kannada News

17-08-2017

ಮೈಸೂರು: ವೀರಶೈವ ಹಾಗೂ ಲಿಂಗಾಯತ ಸಮುದಾಯವೆಂದು ವಿಂಗಡಣೆ ಮಾಡಿ ಲಿಂಗಾಯಿತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂಬುವರ ನಿಲುವನ್ನು ವಿರೋಧಿಸಿ, ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕು ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟದಿಂದ ಟಿ.ನರಸೀಪುರ ಪಟ್ಟಣದಲ್ಲಿಂದು ಬೃಹತ್ ಮೌನ ಪ್ರತಿಭಟನಾ ಜಾಥ  ನಡೆಸಿದ್ದಾರೆ.  ಟಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಿಂದ ಹೊರಟ, ಪ್ರತಿಭಟನಾಕಾರರು ದಾರಿಯುದ್ದಕ್ಕೂ ಯಾವುದೇ ರೀತಿಯ ಘೋಷಣೆಗಳನ್ನು ಕೂಗದೇ ಮೌನವಾಗಿ ಸಾಗಿದರು. ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಬಳಿಕ ಲಿಂಕ್ ರಸ್ತೆಯ ಮೂಲಕ ತಹಸೀಲ್ದಾರ್ ಕಛೇರಿಗೆ ತೆರಳಿ  ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ವೀರಶೈವ ಮತ್ತು ಲಿಂಗಾಯತ ಸಮುದಾಯವೆಂದು ವಿಂಗಡಣೆ ಮಾಡುವುದು ಬೇಡ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ