ಕೂಲಿ ಹಣ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ !

Kannada News

17-08-2017

ಬೆಂಗಳೂರು: ಚಿಕ್ಕಬಳ್ಳಾಪುರದ ಬಾಗೇಪಲ್ಲಿಯ ಗೂಳೂರಿನಲ್ಲಿ ಕೂಲಿ ಹಣ ಕೇಳಿದ್ದಕ್ಕೆ ಕೂಲಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಾಯಗೊಂಡಿರುವ ಗೂಳೂರಿನ ನಾಗರಾಜ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವ ಮತ್ತು ಶ್ರೀರಾಮ್ ಎಂಬ ಸಹೋದರರಿಂದ ನಾಗರಾಜ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ತಮಿಳುನಾಡಿನ ಮಧುರೈನಲ್ಲಿ ರಸ್ತೆ ಕೆಲಸಕ್ಕೆ ಶಿವ ಮತ್ತು ಶ್ರೀರಾಮ್ ಸಹೋದರರು ನಾಗರಾಜ್‍ನನ್ನು ಕಳುಹಿಸಿದ್ದರು. 21 ದಿನಗಳ ಕೂಲಿ ಬಾಕಿ ಇದ್ದು, ಹಣ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ನಾಗರಾಜ್‍ನನ್ನು ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ