ತಾಯಿ-ಮಗು ಅನುಮಾನಾಸ್ಪದ ಸಾವು !

Kannada News

17-08-2017

ಮೈಸೂರು: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಮಹಿಳೆ ಮತ್ತು ಬಾಲಕಿಯ ಮೃತ ದೇಹಗಳು ಪತ್ತೆಯಾಗಿವೆ. ತಾಯಿ ಮತ್ತು ಮಗಳು ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದೂ, ಸುಮಾರು 27 ವರ್ಷದ ಮಹಿಳೆ, 10 ವರ್ಷದ ಬಾಲಕಿ ಎಂದು ಹೇಳಲಾಗುತ್ತಿದೆ. ಆದರೆ ಗುರುತು ಪತ್ತೆಯಾಗಿಲ್ಲ. ಕುಕ್ಕರಹಳ್ಳಿ ಕೆರೆಯ ಬೋಟಿಂಗ್ ಪಾಯಿಂಟ್ ಬಳಿ ಶವಗಳು ಕಾಣಿಸಿಕೊಂಡಿದ್ದೂ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಜಯಲಕ್ಷ್ಮೀಪುರಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ