ಬೈಕ್-ಕಾರು ಮುಖಾಮಖಿ ಡಿಕ್ಕಿ !

Kannada News

18-08-2017

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ, ಮುರುಡೇಶ್ವರ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪೊಲೀಸ್ ಪೇದೆ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೊನ್ನಾವರ ತಾಲ್ಲೂಕಿನ ಮೂಡಕೇರಿ ನಿವಾಸಿ ರಾಮಚಂದ್ರ ಕುಪ್ಪ ನಾಯ್ಕ(29) ಎಂದು ಗುರುತಿಸಲಾಗಿದೆ. ಈತ ಹೊನ್ನಾವರ ಪೊಲೀಸ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯ ಮುಗಿಸಿ ತನ್ನ ಬೈಕ್ ನಲ್ಲಿ ಮನೆಗೆ ತರಳುತ್ತಿದ್ದ ಸಂದರ್ಭ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಗುಮ್ಮನ ಹಕ್ಲ ಹತ್ತಿರ, ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಇನ್ನೊವಾ ಕಾರ್ ಡಿಕ್ಕಿ ಹೊಡೆದು ರಾಮಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ