ಇಂತಹ ನೂರು ಕೇಸ್ ದಾಖಲಿಸಿದರೂ ಹೆದರಲ್ಲ..?

Kannada News

18-08-2017

ಬೆಂಗಳೂರು: ನನ್ನ ವಿರುದ್ಧ ಇಂತಹ ನೂರು ಪ್ರಕರಣ ದಾಖಲಿಸಿದರೂ ನಾನು ಬಗ್ಗುವುದಿಲ್ಲ. ಹೆದರುವುದಿಲ್ಲ. ನಮ್ಮ ಹೋರಾಟವನ್ನು ಹತ್ತಿಕ್ಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗನ ಜಾತಕಗಳನ್ನು ಸೂಕ್ತ ಸಮಯದಲ್ಲಿ, ಸೂಕ್ತ ವೇದಿಕೆಯಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

ಐಟಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ರಮೇಶ್‍ಜಾರಕಿ ಹೊಳಿ  ಅವರನ್ನು ಸಂಪುಟದಿಂದ ಕೈ ಬಿಡಬೇಕು. ಅವರಿಬ್ಬರು ನಿರಪರಾಧಿಗಳು ಎಂದು ಸಾಬೀತಾದರೆ, ಮತ್ತೆ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಿ ನಮ್ಮದೇನು ತಕರಾರು ಇಲ್ಲ. ಸಧ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಎದುರಿಸುತ್ತಿರುವ ಅವರಿಬ್ಬರಿಂದ ರಾಜೀನಾಮೆ ಪಡೆದು ತನಿಖೆಗೆ ಹಾದಿ ಸುಗಮಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ಆರೋಪ ಎದುರಿಸುತ್ತಿರುವವರು ಸಚಿವ ಸ್ಥಾನದಲ್ಲಿದ್ದರೆ ಅವರ ವಿರುದ್ಧ ತನಿಖೆ ನ್ಯಾಯಯುತವಾಗಿ ನಡೆಯುವ ಸಾಧ್ಯತೆ ಇಲ್ಲ. ಆದ್ದರಿಂದ ಅವರು ರಾಜೀನಾಮೆ ಕೊಡಲೇಬೇಕು. ಸಿದ್ದರಾಮಯ್ಯ ಅವರು ಅವರಿಬ್ಬರ ರಾಜೀನಾಮೆ ಪಡೆಯುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಬಂದು ಹೋದ ಮೇಲೆ ಕಾಂಗ್ರೆಸ್ ನಾಯಕರಲ್ಲಿ ನಡುಕ ಹುಟ್ಟಿದೆ. ತಾವು ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ದೃಢಪಟ್ಟ ನಂತರ ಅವರಲ್ಲಿ ಹತಾಶೆ ಉಂಟಾಗಿದ್ದು, ಈ ರೀತಿ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಎಫ್‍.ಐ.ಆರ್ ದಾಖಲಿಸುವಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂದು ಯಡಿಯೂರಪ್ಪ ಟೀಕಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ