ಕೇಂದ್ರ ಸಂಪುಟ ವಿಸ್ತರಣೆ: ರಾಜ್ಯಕ್ಕೆ ಸಿಂಹಪಾಲು...?

Kannada News

18-08-2017

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ ಮಾಡಲು ಕಸರತ್ತು ನಡೆಸುತ್ತಿದ್ದರೆ, ಅತ್ತ ಪ್ರಧಾನಿ ನರೇಂದ್ರ ಮೋದಿ ಕೂಡ ತಮ್ಮ ಸಂಪುಟದಲ್ಲಿ ಕರ್ನಾಟಕಕ್ಕೆ ಸಿಂಹಪಾಲು ನೀಡಲು ಮುಂದಾಗಿದ್ದಾರೆ. ಯಾವುದೇ ಕ್ಷಣದಲ್ಲೂ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಬಾರಿ ಕನಿಷ್ಠ ಮೂರು ಸಚಿವ ಸ್ಥಾನ ಸಿಗುವ ಲಕ್ಷಣಗಳು ಗೋಚರಿಸಿವೆ.

ಉತ್ತರ ಕರ್ನಾಟಕದಿಂದ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಬೆಳಗಾವಿ ಸಂಸದ ಸುರೇಶ್ ಅಂಗಡಿ (ಲಿಂಗಾಯತ ಸಮುದಾಯ) , ವಾಲ್ಮೀಕಿ ಸಮುದಾಯದಿಂದ ಬಳ್ಳಾರಿ ಸಂಸದ ಶ್ರೀರಾಮುಲು, ಒಕ್ಕಲಿಗ ಸಮುದಾಯದಿಂದ ಚಿಕ್ಕಮಗಳೂರು -ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಹಿಂದುಳಿದ ವರ್ಗಗಳ ಸಮುದಾಯದಿಂದ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ.

2018ರ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಮೋದಿಯವರು ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ ಅತಿಯಾಗಿ ಪ್ರತಿಪಾದಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮೋದಿ ಕೂಡ ಅನುಸರಿಸುತ್ತಿದ್ದು, ರಾಜ್ಯ ಸರ್ಕಾರಕ್ಕೆ ಈ ಮೂಲಕ ತಿರುಗೇಟು ನೀಡಲಿದ್ದಾರೆ. ಈಗಾಗಲೇ ಸಂಪುಟಕ್ಕೆ ತೆಗೆದುಕೊಳ್ಳಲಿರುವ ಸಂಸದರ ಜಾತಕವನ್ನು ರಹಸ್ಯವಾಗಿ ತರಿಸಿಕೊಂಡಿರುವ ಮೋದಿ ಹಿರಿತನ, ಪಕ್ಷಕ್ಕೆ ಸಲ್ಲಿಸಿರುವ ಸೇವೆ, ಪ್ರದೇಶವಾರು ಜಾತಿ ಸಮೀಕರಣದ ಮೂಲಕವೇ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ