ಬಿಹಾರ ಪ್ರವಾಹ: 119 ಮಂದಿ ಸಾವು !

Kannada News

18-08-2017

ಪಾಟ್ನಾ: ನೇಪಾಳ ಹಾಗೂ ಬಿಹಾರದಲ್ಲಿ ಸುರಿದ ಭಾರೀ ಮಳೆಗೆ ಬಿಹಾರದ ಗಡಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಭಾರೀ ಪ್ರವಾಹಕ್ಕೆ ಈವರೆಗೂ 119ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15 ಜಿಲ್ಲೆಗಳ 98 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್, ಗೋಪಾಲ್ ಗಂಜ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಪ್ರವಾಹ ಪೀಡಿತ ಜನರ ರಕ್ಷಣೆಗೆ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ 3.59 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. 2.13 ಲಕ್ಷ ಮಂದಿ 504 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. 3.19 ಲಕ್ಷ ಜನರಿಗಾಗಿ 1112 ಸಮುದಾಯ ಅಡುಗೆ ಕೋಣೆಯನ್ನು ತೆರೆಯಲಾಗಿದೆ.

 ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಫುಡ್ ಪ್ಯಾಕೆಟ್ ಗಳನ್ನು ಹೆಲಿಕ್ಯಾಪ್ಟರ್ ಮೂಲಕ ತಲುಪಿಸಲಾಗುತ್ತಿದೆ. ಎನ್.ಡಿ.ಆರ್.ಎಫ್ ನ 114 ಬೋಟ್ ಗಳು ಕಾರ್ಯ ನಿರ್ವಹಿಸುತ್ತಿವೆ. 92 ಎಸ್.ಡಿ.ಆರ್.ಎಫ್ ಹಾಗೂ 70 ಆರ್ಮಿ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ