ಬುಲೆರೋ ವಾಹನ ಹರಿದು ವ್ಯಕ್ತಿ ಸಾವು !

Kannada News

19-08-2017

ಬೆಳಗಾವಿ: ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಬುಲೆರೋ ವಾಹನ ಹರಿದು, ವ್ಯಕ್ತಿ ಸಾವನ್ನಪ್ಪಿರುವ ದಾರಣ ಘಟನೆಯು, ಬೆಳಗಾವಿಯಲ್ಲಿ ನಡೆದಿದೆ. ಬರಮು ತೆಗ್ಗಿನಮನಿ(34) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೋಗೇರಿ ಪಟ್ಟಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯು ಅಟೋ ರಿಕ್ಷಾ ಚಾಲಕನಾಗಿದ್ದರು ಎಂದು ತಿಳಿದು ಬಂದಿದೆ. ಮುಂಜಾನೆ ವಾಯುವಿಹಾರಕ್ಕೆಂದು ತೆರಳಿದ್ದ ಬರಮು ಅವರು, ಕೆಲಕಾಲ ವಿಹಾರ ಮಾಡಿ, ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿರುವಾಗ, ವೇಗವಾಗಿ ಬಂದ ಬುಲೆರೋ ವಾಹನ ಡಿಕ್ಕಿ ಹೊಡೆದು, ಆತನ ಮೇಲೆ ಹರಿದಿದೆ. ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿದ್ದೂ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬುಲೋರೊ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಹಾರೋಗೇರಿ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ