ಕೆರೆಯಪಾಲಾದ ಇಬ್ಬರು ಬಾಲಕಿಯರು !

Kannada News

19-08-2017

ಕೋಲಾರ: ಕೆರೆಯ ದಡದಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾಗಿರುವ ದಾರುಣ ಘಟನೆಯು, ಕೊಲಾರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಂಗಾರ ಪೇಟೆ ತಾಲ್ಲೂಕಿನ, ಕಾಲುವನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗ್ರಾಮದ ನಂದವೇಣಿ(17) ಮತ್ತು ಕಲ್ಯಾಣಿ (16) ಮೃತ ದುರ್ದೈವಿಗಳು. ಮುಂಜಾನೆ ಕೆರೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಬಾಲಕಿಯರು ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಸಹಾಯಕ್ಕೆ ಕೂಗಿಕೊಂಡರು, ಸುತ್ತಮುತ್ತ ಯಾರೂ ಇಲ್ಲದ ಕಾರಣ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ನೀರಿನ ಪ್ರಮಾಣ ಹೆಚ್ಚಿತ್ತು ಎಂದು ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನು ಹೊರ ತೆಗೆದಿದ್ದಾರೆ. ಬಾಲಕಿಯರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ