ತ್ರಿಮೂರ್ತಿಗಳ ಮುಂದೆ ಸಿಎಂ ಆಟ ನಡೆಯದು...?

Kannada News

19-08-2017

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮತ್ತೆ ಪ್ರಕರಣಗಳನ್ನು ದಾಖಲಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನತೆ ಯಡಿಯೂರಪ್ಪರನ್ನು ಮುಂದಿನ ಮುಖ್ಯಮಂತ್ರಿ ಎಂದು ಒಪ್ಪಿಕೊಂಡು ಆಗಿದೆ. ಇದರಿಂದ ವಿಚಲಿತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಪ್ರಕರಣ ದಾಖಲಾಗುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸದರು. ಸಿದ್ದರಾಮಯ್ಯ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯೇ ಕೊನೆಯ ಚುನಾವಣೆಯಾಗಲಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಅವರಾದ, ಬಿಜೆಪಿಯ ತ್ರಿಮೂರ್ತಿಗಳ ಮುಂದೆ ಸಿದ್ದರಾಮಯ್ಯ ಆಟ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ