ಕಳಸಾ-ಬಂಡೂರಿ: ಪ್ರಧಾನಿ ವಿರುದ್ಧ ಅಸಮಾಧಾನ !

Kannada News

19-08-2017

ಬೆಳಗಾವಿ: ಬೆಳಗಾವಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಇಲ್ಲ, ಇಲ್ಲಿ ಏನೇ ಇದ್ದರೂ ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರದಲ್ಲಿದೇ ಎಂದರು. ಕುಮಾರಸ್ವಾಮಿಯವರು ಸದನದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಮಾತನಾಡಿದ್ದರು, ಆದರೆ ಈವರೆಗೂ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ, ಆದರೆ ಈಗ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಇನ್ನು ಡಿಕೆಶಿ ಮನೆ ಮೇಲೆ ಐಟಿ ರೆಡ್ ಮತ್ತು ಬಿಎಸವೈಗೆ ಎಸಿಬಿ ನೋಟಿಸ್ ಕೊಟ್ಟ ವಿಚಾರದ ಕುರಿತು, ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಮಹದಾಯಿ-ಕಳಸಾ ಬಂಡೂರಿ ಯೋಜನೆ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹದಾಯಿ ವಿಚಾರದಲ್ಲಿ ರಾಜಕಾರಣ ಬೇಡ, ಜನರಿಗೆ ಕುಡಿಯುವ ನೀರು ಸಿಗಬೇಕು,ಮಹದಾಯಿ ಸಮಸ್ಯೆಯನ್ನ ಮೂರು ರಾಜ್ಯಗಳು ಕುಳಿತು ಬಗೆಹರಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು. ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯಗಳ ಮಧ್ಯೆ ಒಮ್ಮತ ಮೂಡದಿದ್ದರೇ ಪ್ರಧಾನಿ ಮೋದಿ ಅವರು ನೇತೃತ್ವವಹಿಸಿ, ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸಬೇಕು ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ