ಕಾರು ಪಲ್ಟಿ: ಚಾಲಕ ಬಚಾವ್

Kannada News

21-08-2017

ಬೆಂಗಳೂರು: ಮೈಸೂರು ರಸ್ತೆಯ ನಾಯಂಡಳ್ಳಿ ಜಂಕ್ಷನ್‍ ಬಳಿ, ನಿನ್ನೆ ರಾತ್ರಿ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಾರು ಜಖಂಗೊಂಡು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಮೈಸೂರು ರಸ್ತೆ ಕಡೆಗೆ ತೆರಳುತಿದ್ದ ಕಾರ್ ಗೆ  ನಿನ್ನೆ ರಾತ್ರಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಕಾರ್ ಸಿನಿಮೀಯ ಶೈಲಿಯಲ್ಲಿ ಪಲ್ಟಿ ಹೊಡೆದಿದ್ದೂ, ಚಾಲಕ ಕೀರ್ತಿ ಪಾರಾಗಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಕಾರು ಪಲ್ಟಿ ಚಾಲಕ ಬಚಾವ್ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ