ರಸ್ತೆ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು !

Kannada News

22-08-2017

ವಿಜಯಪುರ: ಶಾಲಾ-ಕಾಲೇಜಿಗೆ ಹೋಗಲು ಬಸ್ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ರಸ್ತೆ ತಡೆದು‌ ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ವಿಜಯಪುರ- ಗುಲಬರ್ಗಾ ರಾಷ್ಟ್ರೀಯ ಹೆದ್ದಾರಿ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಯಿಂದ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು, ಮತ್ತು ಪ್ರಯಾಣಿಕರು ಪರದಾಡಬೇಕಾಯಿತು. ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬರುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ನಗರದಿಂದ ಸಮೀಪ ಇದ್ದರು ಸಹ‌ ಬಸ್ ಒದಗಿಸಿದ ಸಾರಿಗೆ ಅಧಿಕಾರಿಗಳ ‌ವಿರುದ್ಧ ವಿದ್ಯಾರ್ಥಿಗಳು ಆಕ್ರೋಶಭರಿತರಾದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ