ವಿದ್ಯುತ್ ತಂತಿ ತಗುಲಿ ಆನೆ ಸಾವು !  

Kannada News

23-08-2017

ಮೈಸೂರು: ವಿದ್ಯುತ್ ಸ್ಪರ್ಶಕ್ಕೆ ಆನೆ ಬಲಿಯಾಗಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ನರಸಾಪುರ ಗ್ರಾಮದ ನವೀನ್ ಎಂಬುವರ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಬೆಳೆ ರಕ್ಷಣೆಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಯ ಸ್ಪರ್ಶಕ್ಕೆ ಸಿಲುಕಿ, ಸುಮಾರು ಇಪ್ಪತ್ತೈದು ವರ್ಷದ ಗಂಡಾನೆ ಮೃತಪಟ್ಟಿದೆ. ತಡರಾತ್ರಿ ಆಹಾರ ಹುಡುಕಿಕೊಂಡು ಅರಣ್ಯದಿಂದ ನಾಡಿಗೆ ಬಂದಿದ್ದ ಸಲಗ ವಿದ್ಯುತ್ ಸ್ಪರ್ಷಕ್ಕೆ ಬಲಿಯಾಗಿದೆ. ಘಟನಾ ಸ್ಥಳಕ್ಕೆ ಸರಗೂರು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದೌಡಾಯಿಸಿದ್ದೂ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.                 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ