ಟಿಪ್ಪರ್-ಕ್ವಾಲಿಸ್ ಮುಖಾಮುಖಿ ಡಿಕ್ಕಿ !

Kannada News

23-08-2017

ಮಂಡ್ಯ: ಟಿಪ್ಪರ್ ಲಾರಿ ಮತ್ತು ಕ್ವಾಲಿಸ್ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದೂ, ಮೂವರಿಗೆ ಗಂಭೀರ ಗಾಯಗಳಾಗಿವೆ. ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕಿನ ಬಸವನಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರ ಹೆಸರು ಪತ್ತೆಯಾಗಿಲ್ಲ. ಇನ್ನು ಗಾಯಾಳುಗಳು, ನಾಗರಾಜು, ಆನಂದ, ಪ್ರಭುಲಿಂಗ ದೇವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕ್ವಾಲಿಸ್‌ ಕಾರಿನಲ್ಲಿದ್ದವರು ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದವರೆಂದು ಹೇಳಲಾಗುತ್ತಿದೆ. ಕೊಳ್ಳೆಗಾಲದಿಂದ ಬೆಂಗಳೂರು ಕಡೆ ಬರುತ್ತಿದ್ದ ಕ್ವಾಲಿಸ್‌ ಗೆ, ಬೆಂಗಳೂರು ಕಡೆಯಿಂದ ಹೋಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ‌ ಮಳವಳ್ಳಿ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ