ಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆ !  

Kannada News

23-08-2017

ಮಂಡ್ಯ: ಇಬ್ಬರು ಹೆಣ್ಣು ಮಕ್ಕಳಿಗೆ ನೇಣು ಹಾಕಿ ನಂತರ ತಂದೆಯಾದ ತಾನೂ ಆತ್ಮಹತ್ಯೆಗೆ ಶರಣಾಗಿರುವ, ಹೃದಯಾ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ. ಜಯರಾಮ್(45), ಸೌಭಾಗ್ಯ(4), ಹರ್ಷಿಕ(2) ಮೃತ ದುರ್ದೈವಿಗಳು. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನ, ಟಿ.ಚೆನ್ನಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೃತನಿಗೆ ಇಬ್ಬರು ಹೆಂಡತಿಯರು ಇರುವುದು ತಿಳಿದು ಬಂದಿದೆ. ಮೊದಲ ಹೆಂಡತಿಯ ಇಬ್ಬರು ಹೆಣ್ಣು ಮಕ್ಕಳಿಗೆ ನೇಣು ಹಾಕಿ, ನಂತರ ತಂದೆ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ