ಏರ್‌ ಪೋರ್ಟ್‌ನಲ್ಲೂ ಇಂದಿರಾ ಕ್ಯಾಂಟೀನ್ ಬೇಕು...?

Kannada News

23-08-2017

ಮೈಸೂರು: ಬೆಂಗಳೂರಿನ ಕೆಂಪೇಗೌಡ ಏರ್‌ ಪೋರ್ಟ್‌ನಲ್ಲೂ ಇಂದಿರಾ ಕ್ಯಾಂಟೀನ್ ತೆರೆಯಬೇಕು ಎಂದು, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದಿರಾ ಕ್ಯಾಂಟೀನ್ ಕುರಿತು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು, ಏರ್‌ ಪೋರ್ಟ್‌ನಲ್ಲಿ ಎಕಾನಮಿ ಕ್ಲಾಸ್ ಪ್ರಯಾಣಿಕರಿಗೆ ಆಹಾರ ಸೇವನೆ ದುಬಾರಿಯಾಗಿದೆ, ಹೀಗಾಗಿ ಕೆಂಪೇಗೌಡ ಏರ್‌ ಪೋರ್ಟ್‌ನಲ್ಲೂ ಒಂದು ಇಂದಿರಾ ಕ್ಯಾಂಟೀನ್ ತೆಗೆಯಿರಿ ಎಂದು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.  ಸಿಎಂ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಈ ಮೊದಲು ಪ್ರತಾಪ್ ಸಿಂಹ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಟೀಕಿಸಿದ್ದರು. ಆದರೆ ಇದೀಗ ಕೆಂಪೇಗೌಡ ಏರ್‌ ಪೋರ್ಟ್‌ನಲ್ಲೂ ಇಂದಿರಾ ಕ್ಯಾಂಟೀನ್ ತೆರೆಯುವುವಂತೆ ಟ್ವೀಟ್ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ