ವಿಚಾರಣಾಧೀನ ಖೈದಿ ಸಾವು !

Kannada News

23-08-2017

ಕೊಪ್ಪಳ: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿಯೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬಸವರಾಜ ಅಳವಂಡಿ (43) ಮೃತ ಖೈದಿ. ಮಹಿಳೆಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜನನ್ನು ಬಂಧಿಸಲಾಗಿತ್ತು. ಈ ಕುರಿತು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ೨೦೧೪ ರಲ್ಲಿ ದೂರು ದಾಖಲಾಗಿದ್ದೂ, ವಿಚಾರಣಾಧೀನ ಖೈದಿಯಾಗಿ ಕೊಪ್ಪಳದ ಜೈಲಿನಲ್ಲಿದ್ದ ಬಸವರಾಜ, ನಿನ್ನೆ ಜೈಲಿನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮೃತಪಪಟ್ಟಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

ಕೊಪ್ಪಳ ವಿಚಾರಣಾಧೀನ ಖೈದಿ ಸಾವು !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ