ಜೀವನದಲ್ಲಿ ಜಿಗುಪ್ಸೆ ವ್ಯಕ್ತಿ ಆತ್ಮಹತ್ಯೆ !

Kannada News

23-08-2017

ಬೆಂಗಳೂರು: ಜೀವನದಲ್ಲಿ ಜುಗುಪ್ಸೆಯಿಂದ ಹಣ್ಣಿನ ವ್ಯಾಪಾರಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ವಿಜಯನಗರದ ಸರಸ್ವತಿನಗರದಲ್ಲಿ  ನಡೆದಿದೆ. ಸರಸ್ವತಿಪುರಂನ ಜಯಂತ್ (25) ಆತ್ಮಹತ್ಯೆ ಮಾಡಿಕೊಂಡವರು. ಸರಸ್ವತಿ ನಗರದಲ್ಲಿ ತಳ್ಳುಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜಯಂತ್ ಗೆ ಇನ್ನೂ ಮದುವೆಯಾಗಿರಲಿಲ್ಲ. ಜೀವನದಲ್ಲಿನ ಜುಗುಪ್ಸೆಯಿಂದ ರಾತ್ರಿ 11ರ ವೇಳೆ ಮನೆಯಲ್ಲಿ ತಂದೆ-ತಾಯಿ ಮಲಗಿದ್ದಾಗ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ದಾಖಲಿಸಿರುವ ವಿಜಯನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ