ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಸಾವು: ತನಿಖೆಗೆ ಆದೇಶ !

Kannada News

23-08-2017

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಮಕ್ಕಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಸ್ಪತ್ರೆಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಬೇಟಿ ನೀಡಿದ್ದಾರೆ. ಮಕ್ಕಳ ವಾರ್ಡ್,ಮಕ್ಕಳ ತೀವ್ರ ನಿಗಾ ಘಟಕಕ್ಕೆ ಬೇಟಿ, ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದೂ, ನಂತರ ಆಸ್ಪತ್ರೆ ಸಿಬ್ಬಂದಿಗಳ ಜೊತೆಗೆ ಮಾಹಿತಿ ಕಲೆಹಾಕಿದ್ದಾರೆ. ಆಯೋಗದ ಅಧ್ಯಕ್ಷೆ. ಜೊತೆಗೆ ಮಕ್ಕಳ. ಆಯೋಗದ ಅಧ್ಯಕ್ಷೆ ಡಾ.ಕೃಪ ಅಮರ್ ಆಳ್ವಾ ತಂಡ ಭೇಟಿ ನೀಡಿದ್ದರು. ಈ ಕುರಿತು ನಾಲ್ಕು ವಾರಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ. ವೆಂಟಿಲೇಟರ್ ಕೊರತೆ, ಸ್ವಚ್ಛತೆ, ಔಷಧಿ, ಚಿಕಿತ್ಸಾ ಮತ್ತು ಮೂಲಭೂತ ಸೌಕರ್ಯಗಳು ಕಲ್ಪಿಸಲು ಸೂಚನೆ ನೀಡಲಾಗಿದೆ.  ತನಿಖೆಗೆ ಇಬ್ಬರು ಡಿ.ವೈ.ಎಸ್.ಪಿ ಗಳನ್ನು ನೇಮಕ ಮಾಡಲಾಗಿದ್ದೂ, ಅಪೌಷ್ಠಿಕತೆಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುವಂತೆ ಸೂಚಿಸಿದೆ. ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ತನಿಖೆ ನಡೆಸಲಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ