ಭ್ರಷ್ಟ ಅಧಿಕಾರಿಗಳನ್ನು ವಜಾಗೊಳಿಸಿ..?

Kannada News

24-08-2017

ವಿಜಯಪುರ: ಆರೋಗ್ಯ ಇಲಾಖೆಯ ಭ್ರಷ್ಟ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ನಗರದ ಆರೋಗ್ಶ ಮತ್ತು ಕುಟುಂಬ ಕಲ್ಶಾಣ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಡಿಎಸ್ಎಸ್ ಮುಖಂಡರು, ಆರೋಗ್ಶ ಇಲಾಖೆಯ ಭ್ರಷ್ಟ ಅಧಿಕಾರಿ ರಾಜಕುಮಾರ ಯರಗಲ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಅಲ್ಲದೇ ಇಂಡಿ ತಾಲ್ಲೂಕಿನ ಇಂಚಗೇರಿ ಗ್ರಾಮದ ಪ್ರಾಥಮಿಕ ಆರೋಗ್ಶ ಕೇಂದ್ರದ ಸಿಬ್ಬಂದಿ ಅಶ್ವಿನಿ ಚೌಗಲೆˌ ಹೀನಾ ಲೋಕಾಪುರ ಹಾಗೂ ರೇಣುಕಾ ಬೆಳ್ಳೆನವರ ಅವರನ್ನು ವಜಾಗೊಳಿಸಬೇಕು ಎಂದು ಈ ಪ್ರತಿಭಟನೆಯ ನೇತ್ರತ್ವವಹಿಸಿದ ದಲಿತ ಮುಖಂಡ ಜಿತೇಂದ್ರ ಕಾಂಬಳೆ ಒತ್ತಾಯಿಸಿದರು. ಇವರು ಸಾರ್ವಜನಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದೂ, ಅತ್ಯಂತ ಭ್ರಷ್ಟರಾಗಿದ್ದಾರೆ ಎಂದು ಆರೋಪಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ