ಅತ್ಯಾಚಾರ ಎಸಗಿ ಬಾಲಕಿ ಕೊಲೆ !  

Kannada News

24-08-2017 302

ಬೆಂಗಳೂರು: ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಕಾಮುಕರು ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಚಿಂತಾಮಣೀಯ ಮನೆಯಲ್ಲಿ ರಾತ್ರಿ ಮಲಗಿದ್ದ 9 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಎಳೆದೊಯ್ದು ಅತ್ಯಾಚಾರ ಎಸಗಿದ್ದು, ಬಾಲಕಿ ಮನೆಯವರಿಗೆ ಹೇಳುತ್ತಾಳೆ ಎನ್ನುವ, ಭಯದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಎಸ್‍ಪಿ ಕಾರ್ತಿಕ್‍ ರೆಡ್ಡಿ ತಿಳಿಸಿದ್ದಾರೆ. ಮಲಗಿದ್ದ ಮಗಳು ಮನೆಯಲ್ಲೆಲ್ಲೂ ಕಾಣದಿದ್ದಾಗ ಆತಂಕಗೊಂಡ ಪೋಷಕರು ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದಾಗ, ಗ್ರಾಮದ ಹೊರಭಾಗದ ಪೊದೆಯೊಂದರಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ,ಆಕೆಯನ್ನು ಕತ್ತು ಹಿಸುಕಿ ಸಾಯಿಸಿರುವುದು ವೈದ್ಯಕೀಯ ಪರೀಕ್ಷೆಯಿಂದ ಸಾಬೀತಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ಗ್ರಾಮಾಂತರ ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ