ಮಾವುತರ ಮಕ್ಕಳಿಗೆ ಪುಸ್ತಕ ವಿತರಣೆ !

Kannada News

24-08-2017

ಮೈಸೂರು: ಗಣೇಶ ಹಬ್ಬದ ಪ್ರಯುಕ್ತ ಗಜಪಡೆಯ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಸಮವಸ್ತ್ರ ವಿತರಣೆ ಮಾಡಲಾಯಿತು. ಮೈಸೂರಿನ ಎಸ್.ಎಂ.ಪಿ ಡೆವಲಪರ್ ಸಂಸ್ಥೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಾವುತ ಮತ್ತು ಕಾವಾಡಿಗರ ಕುಟುಂಬಕ್ಕೆ ಬಟ್ಟೆ ಹಾಗೂ ಮಕ್ಕಳಿಗೆ ಪುಸ್ತಕಗಳ ವಿತರಣೆ ಮಾಡಿದರು. ಡಿಸಿಎಫ್ ಏಡುಕೊಂಡಲು ಸಮ್ಮುಖದಲ್ಲಿ, ಅರಮನೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಮವಸ್ತ್ರ ವಿತರಿಸಿ, ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದರು. ಸಮವಸ್ತ್ರ, ಪುಸ್ತಕ ಪಡೆದ ಮಾವುತರ ಮಕ್ಕಳು, ಸಂತಸ ವ್ಯಕ್ತಪಡಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ