ಕೃಷಿ ಹೊಂಡದಲ್ಲಿ ಬಿದ್ದು, ದಂಪತಿ ಸಾವು !

Kannada News

26-08-2017

ಕೋಲಾರ: ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದ ದಂಪತಿ, ಸಾವನ್ನಪ್ಪಿರುವ ದಾರುಣ ಘಟನೆಯು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲ್ಲೂಕಿನ ಹರಟಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಶ್ರೀರಾಮಪ್ಪ (50) ,ಲಲಿತಮ್ಮ (45) ಮೃತ ದಂಪತಿಗಳು, ಬೆಳಿಗ್ಗೆ ಹೊಲದಲ್ಲಿ ಕೆಲಸಕ್ಕೆಂದು ಹೋಗಿದ್ದೂ, ಕೃಷಿಹೊಂಡದಲ್ಲಿ ಕಾಲು ಜಾರಿ ಬಿದ್ದ ಲಲಿತಮ್ಮರನ್ನು ರಕ್ಷಿಸಲು ಹೋದ ಶ್ರೀರಾಮಪ್ಪ ಕೂಡಾ, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮುಂದಿನ ತನಿಖೆ ಕೈಗೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ