ಆರ್.ಟಿ.ಒ ಕಚೇರಿಗೆ ಬೆಂಕಿ ಲಕ್ಷಾಂತರ ನಷ್ಟ !

Kannada News

26-08-2017

ಬೆಂಗಳೂರು: ಇಂದಿರಾನಗರದ ಹಳೆ ಮದ್ರಾಸ್ ರಸ್ತೆಯಲ್ಲಿರುವ ಸಾರಿಗೆ (ಆರ್.ಟಿ.ಓ) ಕಚೇರಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಪೀಠೋಪಕರಣಗಳು, ದಾಖಲೆಪತ್ರಗಳು ಬೆಂಕಿಗಾಹುತಿಯಾಗಿವೆ. ಕಚೇರಿಯ 2ನೇ ಮಹಡಿಯಲ್ಲಿ ಸಂಜೆ 5ರ ವೇಳೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಹೊರಬರಲಾರಂಭಿಸಿದೆ. ಇದನ್ನು ನೋಡಿದ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮದ ದಳದ 5 ವಾಹನಗಳು ರಾತ್ರಿ 10ರವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಬೆಂಕಿಯಿಂದ ಕಚೇರಿಯಲ್ಲಿದ್ದ ಕಂಪ್ಯೂಟರ್ಗಳು, ಪೀಠೋಪಕರಣಗಳು, ದಾಖಲೆಪತ್ರಗಳು ಸುಟ್ಟು ಹೋಗಿ, ಲಕ್ಷಾಂತರ ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ತಿಳಿದು ಬಂದಿದೆ. ಕಚೇರಿಗೆ ರಜೆ ಇದ್ದುದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ