ತಂದೆ-ತಾಯಿ ವಿರುದ್ಧ ಬಾಲಕಿ ದೂರು..?

Kannada News

28-08-2017

ಮೈಸೂರು: ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ವಿವಾಹ ನೆರವೇರಿಸಿದ್ದ ಪೋಷಕರ ವಿರುದ್ಧ ದೂರು ದಾಖಲಾಗಿದೆ. ಘಟನೆಯು ಮೈಸೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೇ ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ, ಜಾಲಹಳ್ಳಿ ಗ್ರಾಮದ ಪುರುಷೋತ್ತಮ ಎಂದು ತಿಳಿದು ಬಂದಿದೆ. ಕಳೆದ 6 ತಿಂಗಳ ಹಿಂದೆ 16 ವರ್ಷದ ಅಪ್ರಾಪ್ತ ಬಾಲಕಿಗೆ ತನ್ನ ಇಚ್ಚೆ ಇಲ್ಲದಿದ್ದರೂ, ಬಲವಂತವಾಗಿ ಪೋಷಕರು ಮದುವೆ ಮಾಡಿದ್ದರು. 6 ತಿಂಗಳ ಬಳಿಕ ತವರಿಗೆ ಬಂದಾಗ, ಪೋಷಕರ ಕಣ್ತಪ್ಪಿಸಿ, ಪೊಲೀಸರಿಗೆ ದೂರು ನೀಡಿದ್ದಾಳೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ, ಹೊಸಹೊಳಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಉಭಯ ಪೋಷಕರ ವಿರುದ್ಧ ಎಚ್.ಡಿ ಕೋಟೆ ತಾಲ್ಲೂಕು ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ