ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ !

Kannada News

28-08-2017

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಈ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಆತ್ಮಹತ್ಯೆಗೆ ಶರಣಾದವರನ್ನು ಜಿ.ಸಿ.ರಮೇಶ್ ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ನಲ್ಲಿ, ತನ್ನ ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ನೀಡುವಂತೆ ಬರೆದಿದ್ದಾರೆ. ಮೃತ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೇಟ್ ಪತ್ತೆಯಾಗಿದೆ. ಅದು ಧರ್ಮಪುರಿ ಇಂದ ಪ್ರಯಾಣಿಸಲಾದ ಟಿಕೆಟ್ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯನ್ನು ಹಾಸನದ, ಅರಸೀಕೆರೆ ಮೂಲದ ವ್ಯಕ್ತಿ ಎನ್ನಲಾಗುತ್ತಿದೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಅಲ್ಲದೆ ಪ್ರಕರಣವು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ