ಕ್ಯಾಬ್ ಡಿಕ್ಕಿ ವೃದ್ಧ ಸಾವು !

Kannada News

28-08-2017

ಬೆಂಗಳೂರು: ಬ್ಯಾಟರಾಯನಪುರದ ಮೇಲ್ಸೇತುವೆ ರಸ್ತೆಯಲ್ಲಿ, ಹಿಂದಿನಿಂದ ವೇಗವಾಗಿ ಬಂದ ಕ್ಯಾಬ್ ಡಿಕ್ಕಿ ಹೊಡೆದು ಸ್ಕೂಟರ್‍ ನಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಸಹಕಾರ ನಗರದ ಪಾಪಯ್ಯ( 86)ಎಂದು ಗುರುತಿಸಲಾಗಿದೆ. ಸಹಕಾರನಗರದ ಮನೆಯಿಂದ ಮಧ್ಯಾಹ್ನ 1.30ರ ವೇಳೆ ಪಾಪಯ್ಯ ಅವರು, ಸ್ಕೂಟಿಯಲ್ಲಿ ಬ್ಯಾಟರಾಯನಪುರ ಮೇಲ್ಸೇತುವೆ ರಸ್ತೆಯಲ್ಲಿ ಹೋಗುತ್ತಿದ್ದಾಗ, ವಿಮಾನ ನಿಲ್ದಾಣ ಕಡೆಗೆ ಹೋಗುತ್ತಿದ್ದ ಕ್ಯಾಬ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಪಾಪಯ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರಕರಣ ದಾಖಲಿಸಿರುವ ಹೆಬ್ಬಾಳ ಸಂಚಾರ ಪೊಲೀಸರು ಕ್ಯಾಬ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ