ಮನೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ !

Kannada News

28-08-2017 399

ಬೆಂಗಳೂರು: ನಗರದ ಹೊರವಲಯದ ದೇವನಹಳ್ಳಿಯಲ್ಲಿನ ಮನೆಯೊಂದಕ್ಕೆ ತಡ ರಾತ್ರಿ ಅಕಸ್ಮಿಕ ಬೆಂಕಿ ತಗುಲಿ, ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಹಳೆ ಆರ್.ಟಿ.ಒ ಕಚೇರಿ ಬಳಿಯ ಕೃಷ್ಣಪ್ಪ ಎಂಬುವರ ಮನೆಯಲ್ಲಿ ಕಳೆದ ರಾತ್ರಿ ಯಾರು ಇಲ್ಲದ ವೇಲೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ ನಿಂದ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಹೊರಬರಲಾರಂಭಿಸಿದೆ. ತಕ್ಷಣ ಪಕ್ಕದ ಮೆನೆಯವರು ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಅಗ್ನಿ ಅವಘಡದಿಂದ ಮನೆಯಲ್ಲಿದ್ದ ಫ್ರಿಡ್ಜ್, ಟಿವಿ, ಸೋಪಾ ಸೇರಿದಂತೆ ಗೃಹಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ